ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರು ಕೇಳಿಬರುತ್ತಿದ್ದಂತೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರ ಪರವಾಗಿ ಮಾತನಾಡಿದ್ದಾರೆ. ದೇವರ ದರ್ಶನದ ವೇಳೆಯೂ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಲ್ಲುವ ಮಹಿಳೆ ಎಂದು ಹೊಗಳಿದ್ದಾರೆ.
ಸಿದ್ದರಾಮಯ್ಯ ಪತ್ನಿ ಯಾವತ್ತೂ ಅಧಿಕಾರ ದುರ್ಬಳಕೆ ಮಾಡಿಕೊಂಡವರೇ ಅಲ್ಲ. ಅವರು ಅಧಿಕಾರದಲ್ಲಿದ್ದಾಗಲೂ ದೇವರ ದರ್ಶನಕ್ಕೆ ಹೋದಾಗ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುವ ವ್ಯಕ್ತಿ. ನಮ್ಮಲ್ಲಿ ಎಷ್ಟೋ ಜನ ಇನ್ನೂ ಅವರ ಮುಖವನ್ನೇ ನೋಡಿಲ್ಲ ಎಂದು ಡಿಕೆಶಿ ಹೊಗಳಿದ್ದಾರೆ.
ಇಂತಹ ಹೆಣ್ಣಿನ ಬಗ್ಗೆ ಅಧಿಕಾರಿ ದುರುಪಯೋಗ ಆರೋಪ ಮಾಡುತ್ತೀರಲ್ಲಾ? ಈ ನಿಮ್ಮ ಪಾಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಾರ್ವತಿ ಅಮ್ಮ ಕ್ಷಮಿಸಿದರೂ ಆ ಬೆಟ್ಟದ ತಾಯಿ ಚಾಮುಂಡಿ ಕ್ಷಮಿಸಲ್ಲ ಎಂದು ಡಿಕೆ ಶಿವಕುಮಾರ್ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.
ಸಿಎಂ ಪತ್ನಿ ಪಾರ್ವತಿ ಹೆಸರಿನಲ್ಲಿ ಮುಡಾದಲ್ಲಿ ಅಕ್ರಮವಾಗಿ ಸೈಟ್ ಪಡೆಯಲಾಗಿದೆ ಎಂದು ವಿಪಕ್ಷಗಳು ಆರೋಪಿಸಿ ಈಗ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿವೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಟ್ಟಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕರು ಸಿಎಂ ಬೆನ್ನಿಗೆ ನಿಂತಿದ್ದಾರೆ.