ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

Sampriya

ಬುಧವಾರ, 6 ಆಗಸ್ಟ್ 2025 (16:34 IST)
ರಾಮನಗರ: ಈಗಾಲೂ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ಸಿಗಬೇಕೆಂದು ಹೇಳುತ್ತೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದ್ದಾರೆ. 

ಕರ್ನಾಟಕ ಸಿಎಂ ಕುರ್ಚಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸಂದರ್ಭದಲ್ಲಿ ನಾನು ಸಿಎಂ ಆಗಿ ಡಿಕೆ ಶಿವಕುಮಾರ್‌ ಆಯ್ಕೆ ಆಗಬೇಕೆಂಬುದನ್ನು ಹೇಳುತ್ತೇನೆ. ಈಗಲೂ ನನ್ನ ಹೇಳಿಕೆಯನ್ನ ನಾನು ಸಮರ್ಥಿಸಿಕೊಳ್ಳುತ್ತೇನೆ. ಡಿಕೆಶಿಯವರಿಗೆ ಸ್ಥಾನಮಾನ, ಗೌರವ ಕೊಡಿ ಅಂತ ಕೇಳೋಕೆ ನನಗೆ ಹಕ್ಕಿಲ್ವಾ. ನಾನು ಈ ಜಿಲ್ಲೆಯಲ್ಲಿ ಹುಟ್ಟಿದ್ದೀನಿ, ಅವರು ನಮ್ಮ ಜೊತೆ ಹುಟ್ಟಿದ್ದಾರೆ. ಅವರ ಹೋರಾಟಕ್ಕೆ ಬೆಲೆ ಇಲ್ವಾ ಎಂದು ಪ್ರಶ್ನೆ ಮಾಡಿದರು. 

ಇನ್ನೂ ಆ.8ಕ್ಕೆ ಚುನಾವಣಾ ಅಕ್ರಮದ ವಿರುದ್ಧ ಕಾಂಗ್ರೆಸ್ ಹೋರಾಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗದ ಹೋರಾಟಕ್ಕೆ ಹೈಕಮಾಂಡ್ ರೂಪುರೇಷೆ ನೀಡಿದೆ. 

ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ನಡೆಯುವ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. 

ನಮ್ಮ ಜಿಲ್ಲೆಯಿಂದ ಸುಮಾರು 20ಸಾವಿರ ಮಂದಿ ಭಾಗಿಯಾಗುತ್ತಿದ್ದೇವೆ. ಅವರ ಹೋರಾಟಕ್ಕೆ ನಾವು ಬೆಂಬಲ ಕೊಡುತ್ತೇವೆ. ಇವಿಎಂ ತೊಂದರೆಯಾ? ಏನು ಆಗಿದೆ ಎಂಬುದು ನಮಗೆ ಗೊತ್ತಿಲ್ಲ. ಯಾವ ರೀತಿ ಅಕ್ರಮ ಆಗಿದೆ ಎಂಬುದರ ಬಗ್ಗೆ ನಮ್ಮ ರಾಷ್ಟ್ರ ನಾಯಕರು ಮಾಹಿತಿ ಕೊಡುತ್ತಾರೆ ಎಂದು ತಿಳಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ