DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

Krishnaveni K

ಸೋಮವಾರ, 19 ಮೇ 2025 (17:22 IST)
ಬೆಂಗಳೂರು: ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದರೆ ಡಿಸಿಎಂ ಡಿಕೆ ಶಿವಕುಮಾರ್ ವರಸೆಯೇ ಬದಲಿಸಿದ್ದು, ಪ್ರತೀ ತಿಂಗಳು ಹಣ ಕೊಡ್ತೀವಿ ಎಂದು ಹೇಳಿಯೇ ಇಲ್ಲ ಎನ್ನುತ್ತಿದ್ದಾರೆ.

ಕರ್ನಾಟಕದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಪ್ರತೀ ತಿಂಗಳು ಮನೆಯ ಯಜಮಾನಿಯ ಖಾತೆಗೆ 2,000 ರೂ. ಹಣ ನೀಡಲಾಗುತ್ತದೆ. ಆದರೆ ಕಳೆದ ಮೂರು ತಿಂಗಳಿನಿಂದ ಈ ಯೋಜನೆಯ ಹಣ ಜಮೆ ಆಗಿಲ್ಲ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಣ ಯಾವಾಗ ಹಾಕುತ್ತೀರಿ ಎಂದು ಸಿಎಂ ಸಿದ್ದರಾಮಯ್ಯಗೆ ಕೇಳಿದರೂ ಸರಿಯಾದ ಉತ್ತರ ಕೊಟ್ಟಿರಲಿಲ್ಲ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಬಳಿ ಮಾಧ್ಯಮಗಳು ಕೇಳಿದಾಗ ‘ತಿಂಗಳು ತಿಂಗಳು ಹಣ ಕೊಡ್ತೀವಿ ಎಂದು ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು, ನಾವು ದುಡ್ಡು ಹಾಕ್ತಾ ಇರಬೇಕು.ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? ಎರಡೋ ಮೂರೋ ಐದೋ ವರ್ಷವಾಗುತ್ತದೆ. ಇದೂ ಹಾಗೆಯೇ’ ಎಂದು ಉಲ್ಟಾ ಹೊಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ