ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

Krishnaveni K

ಬುಧವಾರ, 22 ಅಕ್ಟೋಬರ್ 2025 (16:59 IST)
ಬೆಂಗಳೂರು: ಇಂದು ಮಂತ್ರಾಲಯಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಭಕ್ತಿಯಿಂದ ರಾಯರ ಪೂಜೆ ಮಾಡಿದ್ದಾರೆ. ಮಂತ್ರಾಲಯದಲ್ಲಿ ಪೂಜೆ ಸಲ್ಲಿಸಿದ ಕ್ಷಣಗಳನ್ನು ಡಿಕೆಶಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದು, ನೀವು ಸಿಎಂ ಆಗೇ ಆಗ್ತೀರಾ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಇಂದು ಪತ್ನಿ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ರಾಯರ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಬಳಿಕ ಸ್ವಾಮೀಜಿಯವರ ಆಶೀರ್ವಾದವನ್ನೂ ಪಡೆದುಕೊಂಡಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಭಕ್ತಿ ಭಾವದಿಂದ ಪೂಜೆ ಸಲ್ಲಿಸಿದ್ದಾರೆ.

ಬಳಿಕ ರಾಘವೇಂದ್ರ ಸ್ವಾಮಿಗಳು ತಪಸ್ಸುಗೈದ ಪವಿತ್ರ ಭೂಮಿ, ರಾಯಚೂರು ಜಿಲ್ಲೆಯ ಗಾಣದಾಳದಲ್ಲಿ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಈ ಎಲ್ಲಾ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು ಸರ್ವರಿಗೂ ಒಳಿತಾಗಲೆಂದು ಪ್ರಾರ್ಥಿಸಿರುವುದಾಗಿ ಹೇಳಿಕೊಂಡಿದ್ದಾರೆ.

ತಾವು ರಾಯರ ಮೇಲಿಟ್ಟಿರುವ ನಂಬಿಕೆ ಸುಳ್ಳಾಗಲ್ಲ. ಇಂದು ಒಳ್ಳೆಯ ದಿನ ರಾಯರ ದರ್ಶನ ಪಡೆದಿದ್ದೀರಿ. ರಾಯರು ನಂಬಿದ ಭಕ್ತರನ್ನು ಎಂದಿಗೂ ಕೈ ಬಿಡಲ್ಲ ಎಂದು ಪಬ್ಲಿಕ್ ಡಿಕೆ ಶಿವಕುಮಾರ್ ಗೆ ಕಾಮೆಂಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ