ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಡಿ.ಕೆ.ಶಿವಕುಮಾರ್
ಮಂಗಳವಾರ, 15 ಜನವರಿ 2019 (09:42 IST)
ಬೆಂಗಳೂರು : ಕೈ ಅತೃಪ್ತರ ಭಿನ್ನಮತೀಯ ಚಟುವಟಿಕೆ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಪವರ್ ಪುಲ್ ನಾಯಕ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಮತ ಸ್ಪೋಟವಾಗಿದೆ.
‘ಬಿಜೆಪಿ ಬಗ್ಗೆ ಸಿಎಂ ಕುಮಾರಸ್ವಾಮಿ ಸಹಾನುಭೂತಿ ಹೊಂದಿದ್ದಾರೆ’ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಮೊದಲ ಬಾರಿಗೆ ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
‘ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಅಪರೇಶನ್ ಬಗ್ಗೆ ಸಿಎಂಗೆ ಮಾಹಿತಿ ಇದೆ. ಶಾಸಕರಿಗೆ ಆಮಿಷವೊಡ್ಡುತ್ತಿರುವ ಬಗ್ಗೆಯೂ ಸಿಎಂ ಕುಮಾರಸ್ವಾಮಿಗೆ ನಿಖರ ಮಾಹಿತಿ ಇದೆ. ಸ್ವತಃ ಶಾಸಕರೇ ತಮಗೆ ಆಮಿಷವೊಡ್ಡುತ್ತಿರುವ ಬಗ್ಗೆ ಸಿಎಂಗೆ ಮಾಹಿತಿ ಕೊಟ್ಟಿದ್ದಾರೆ. ನಾನಾಗಿದ್ದರೆ 24 ಗಂಟೆಗಳಲ್ಲಿ ಎಲ್ಲವನ್ನೂ ಬಯಲು ಮಾಡ್ತಿದ್ದೆ’ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.