ಬೆಂಗಳೂರು: ಈ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜಕೀಯದಲ್ಲಿ ಏನೆಲ್ಲಾ ಬದಲಾವಣೆಗಳಾಗಬಹುದು ಎಂಬ ಬಗ್ಗೆ ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಈ ಲೋಕಸಭೆ ಚುನಾವಣೆಯಲ್ಲಿ ಸರಳ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬಹುದು ಎಂದು ಸಮೀಕ್ಷೆಗಳು ಹೇಳುತ್ತಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಅವರ ಪ್ರಕಾರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೋದಿ ಪ್ರಧಾನಿಯಾಗಲು ಕೊಂಚ ಅಡೆತಡೆಗಳಿವೆ. ಕೊಂಚ ತಡವಾಗಿ ಸರ್ಕಾರ ರಚನೆಯಾಗಲಿದೆ. ಪ್ರಧಾನಿ ಅಭ್ಯರ್ಥಿ ಆಯ್ಕೆ ಗೊಂದಲವಾಗಲಿದೆ. ಬಿಹಾರ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಮತಗಳು ಬರಬಹುದು. ಹೀಗಾದಲ್ಲಿ ಮೈತ್ರಿ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕಾದೀತು.
ಇನ್ನು, ರಾಜ್ಯ ರಾಜಕೀಯದಲ್ಲೂ ಬದಲಾವಣೆಗಳಾಗಲಿವೆ. ರಾಜ್ಯದಲ್ಲಿ ಸರ್ಕಾರ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುವ ಸಾಧ್ಯತೆಯಿದೆ. ಡಿಕೆ ಶಿವಕುಮಾರ್ ಗೆ ರಾಜಯೋಗವಿದ್ದು, ಮುಖ್ಯಮಂತ್ರಿ ಪಟ್ಟಕ್ಕೇರುವ ಅವಕಾಶವಿದೆ ಎಂದು ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ.