ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್‌ ತೊಡೆ ತಟ್ಟಿ ನಿಂತಿದ್ದಾರೆ: ಬಿವೈ ವಿಜಯೇಂದ್ರ

Sampriya

ಗುರುವಾರ, 5 ಡಿಸೆಂಬರ್ 2024 (19:00 IST)
ಯಾದಗಿರಿ: ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ತ್ಯಜಿಸಬೇಕೆಂದು ಡಿಕೆ ಶಿವಕುಮಾರ್ ಅವರು ಈಗಾಗಲೇ ಹೋರಾಟ ಆರಂಭಿಸಿದ್ದಾರೆ. ಮುಂಬರುವ ದಿನಗಳಲ್ಲಿ ಇದು ಯಾವ ಮಟ್ಟಕ್ಕೆ ಹೋಗುತ್ತದೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ನುಡಿದರು.

ಯಾದಗಿರಿಯ ಶಹಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್‌ನಲ್ಲಿ ಬಡಿಗೆ ಹಿಡಿದುಕೊಂಡು ಹೊಡೆದಾಡಿಕೊಳ್ಳುತ್ತಾರೆ. ಹಿರಿಯ ನಾಯಕರು ಒಳಗೊಂಡಂತೆ ಶಾಸಕರುಗಳು ಬಡಿಗೆ ತೆಗೆದುಕೊಂಡು ರಸ್ತೆಯಲ್ಲಿ ಹೊಡೆದಾಟಿಕೊಳ್ಳುತ್ತಾರೆ. ಅಂತಹ ಪರಿಸ್ಥಿತಿ ಈಗ ನಿರ್ಮಾಣವಾಗಿದೆ ಎಂದರು.

ಹಾಸನ ಕಾಂಗ್ರೆಸ್ ಸಮಾವೇಶದ  ಬಗ್ಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಬದಿಗಿಟ್ಟು ಶಕ್ತಿ ಪ್ರದರ್ಶನ ಮಾಡಲು ಹೊರಟಿದ್ದಾರೆ. ಡಿಕೆಶಿ ಅವರು ಕೋಟೆಗೆ ನುಗ್ಗಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ಯಾವ ರೀತಿ ಬದಲಾವಣೆ ಆಗುತ್ತದೆ ನೋಡಿ, ಸಿದ್ದರಾಮಯ್ಯ ಸಿಎಂ ಅವಧಿ ಮುಗಿದಿದೆ ಅಧಿಕಾರ ಬಿಟ್ಟು ಕೊಡಿ ಎಂದು ಡಿಕೆಶಿವಕುಮಾರ್ ತೊಡೆ ತಟ್ಟಿಕೊಂಡು ನಿಂತಿದ್ದಾರೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ