ಡಿಕೆ ಶಿವಕುಮಾರ್ ಗೆ ಯೋಗ್ಯತೆ ಇಲ್ಲಾಂದ್ರೆ ಚುನಾವಣೆಗೆ ಹೋಗೋಣ: ಡಿಕೆ ಸುರೇಶ್

Krishnaveni K

ಶನಿವಾರ, 29 ಜೂನ್ 2024 (11:56 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಡಿಸಿಎಂ ಹುದ್ದೆಗಾಗಿ ಬೇಡಿಕೆ ಮತ್ತು ಕೆಪಿಸಿಸಿ ಅಧ್ಯಕ್ಷ ಬದಲಾವಣೆಗೆ ಜೋರಾಗಿ ಫೈಟ್ ನಡೆಯುತ್ತಿದೆ. ಈ ನಡುವೆ ಡಿಕೆ ಶಿವಕುಮಾರ್ ಪರವಾಗಿ ತಮ್ಮ ಡಿಕೆ ಸುರೇಶ್ ಬ್ಯಾಟ್ ಬೀಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಇತ್ತೀಚೆಗೆ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ್ದರು. ಇದಕ್ಕೆ ಡಿಕೆ ಸುರೇಶ್ ತೀವ್ರವಾಗಿ ತಿರುಗೇಟು ನೀಡಿದ್ದಾರೆ. ಒಂದು ವೇಳೆ ಡಿಕೆ ಶಿವಕುಮಾರ್ ಬದಲಾಗಬೇಕು ಎಂದರೆ ಚುನಾವಣೆಗೆ ಹೋಗೋಣ ಎಂದಿದ್ದಾರೆ.

ಹೈಕಮಾಂಡ್ ಎಲ್ಲರಿಗೂ ಒಂದು ಜವಾಬ್ಧಾರಿ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರ ಜವಾಬ್ಧಾರಿ ನಿಭಾಯಿಸುತ್ತಿದ್ದಾರೆ. ಅವರು ಎಲ್ಲಾ ವಿವರವನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದಾರೆ. ಒಂದು ವೇಳೆ ಡಿಕೆ ಶಿವಕುಮಾರ್ ಗೆ ಯೋಗ್ಯತೆ ಇಲ್ಲ ಎಂದಾದರೆ ಚುನಾವಣೆಗೆ ಹೋಗೋಣ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

ಯಾರ ಹುದ್ದೆಯೂ ಶಾಶ್ವತ ಅಲ್ಲ. ಹೇಳಿಕೆ ನೀಡುವಾಗ ಯೋಚಿಸಿ ನೀಡಬೇಕು. ಹಿಂದೆ ತಿರುಗಿ ಅವರ ಬೆನ್ನನ್ನೇ ನೋಡಿಕೊಳ್ಳಬೇಕಾಗುತ್ತದೆ ಎಂದು ಕೆಎನ್ ರಾಜಣ್ಣಗೆ ತಿರುಗೇಟು ನೀಡಿದ್ದಾರೆ. ಇನ್ನು ಸಿಎಂ ಬದಲಾವಣೆ ವಿಚಾರವಾಗಿ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಅದು ಸ್ವಾಮೀಜಿಯವರ ವೈಯಕ್ತಿಕ ಅಭಿಪ್ರಾಯ. ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಇದ್ದಾಗ ಯಾರು ಎಂಬ ಪ್ರಶ್ನೆ ಬರುತ್ತದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ