ಡಿಕೆಶಿ ಇಡಿ ಸಮನ್ಸ್ ರದ್ದು ಕೋರಿ ಅರ್ಜಿ ಸಲ್ಲಿಸಿದ ಪ್ರಕರಣ; ಇಂದು ಕೋರ್ಟ್ ನಿಂದ ತೀರ್ಪು ಪ್ರಕಟ

ಬುಧವಾರ, 28 ಆಗಸ್ಟ್ 2019 (10:43 IST)
ಬೆಂಗಳೂರು : ದೆಹಲಿಯ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಸಮನ್ಸ್ ರದ್ದು ಕೋರಿ ಡಿಕೆಶಿವಕುಮಾರ್  ಸಲ್ಲಿಸಿದ್ದ ಅರ್ಜಿ ಪ್ರಕರಣದ ತೀರ್ಪು ಇಂದು ಹೊರಬೀಳಲಿದೆ.




ದೆಹಲಿಯ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ವೇಳೆ ಐಟಿ ಅಧಿಕಾರಿಗಳು 8.59 ಕೋಟಿ ಹಣ ಜಪ್ತಿ ಮಾಡಿದ್ದರು. ಹಣ ಮೂಲದ ಬಗ್ಗೆ ವಿವರಣೆ ನೀಡುವಂತೆ ಡಿಕೆಶಿ ಮತ್ತು ಆಪ್ತರಿಗೆ ಇಡಿ ಸಮನ್ಸ್ ನೀಡಿತ್ತು. ಇಡಿ ನೋಟಿಸ್ ಪ್ರಶ್ನಿಸಿ ಡಿಕೆಶಿ ಹಾಗೂ ಅವರ ತಂಡ ಹೈಕೋರ್ಟ್ ಮೇಟ್ಟಿಲೇರಿತ್ತು.


ಈ ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟ ವಾದ ಪ್ರತಿವಾದ ಮುಕ್ತಾಯವಾಗಿದೆ. ಇಂದು ಈ ಬಗ್ಗೆ ತೀರ್ಪು ಪ್ರಕಟಗೊಳ್ಳಲಿದೆ. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಕ್ಲೀನ್ ಚಿಟ್ ಸಿಗಲಿದೆಯಾ ಎಂಬುದು ಕಾದು ನೋಡಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ