ಬೆಂಗಳೂರು : ಡಿ.ಕೆ.ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಗೆ ಮಾತನಾಡಿದ ಅವರು, ಇಬ್ಬರೂ ಹೊರನೋಟಕ್ಕೆ ವಿರೋಧ ಮಾಡ್ತಾರೆ. ಆದ್ರೆ ಆಂತರಿಕವಾಗಿ ಸರ್ಕಾರದ ಜೊತೆ ಇದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸುವೆ. ನನ್ನ ಸೇವೆ ಪರಿಗಣಿಸಿ ಪಕ್ಷ ಅವಕಾಶ ಕೊಟ್ಟಿದೆ. ಪಕ್ಷವನ್ನು ಬಲಪಡಿಸುವ ಕೆಲಸ ಮಾಡುವೆ ಎಂದು ಅವರು ತಿಳಿಸಿದ್ದಾರೆ.