ಡಿಕೆಶಿ ಕೇಸ್ ವಾಪಸ್ ಅನೈತಿಕ, ಕೋರ್ಟ್‌ಗೆ ಮೊರೆ-ಬಿಜೆಪಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಇದು ಅನೈತಿಕ, ಅಕ್ಷಮ್ಯ. ಸರ್ಕಾರದ ಈ ನಿರ್ಧಾರ ವಿರುದ್ಧ ಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದಿರುವ ಮುಖಂಡರು, ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆಯೂ ಆಗ್ರಹಿಸಿದ್ದಾರೆ.