ಕಾಂಗ್ರೆಸ್ನಿಂದ ಬಿಜೆಪಿಗೆ ಯಾರು ಬರ್ತಾರೆ ಡಿಕೆಶಿಗೆ ಗೊತ್ತು : ಡಿಕೆಶಿ ಗೆ ಸಿಎಂ ಟಾಂಗ್
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ಪ್ರಮುಖರ ಸಭೆ ನಡೆಯಿತು. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಯಿ ಹಾವೇರಿ ಜಿಲ್ಲೆಯಿಂದ ಹಾಲಿ ಬಿಜೆಪಿ ಶಾಸಕ ಕಾಂಗ್ರೆಸ್ ಗೆ ಬರುತ್ತಾರೆ ಅಂತ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ರು ಮೊದಲು ಅವರ ಪಕ್ಷದಲ್ಲಿರೋರನ್ನು ಉಳಿಸಿಕೊಳ್ಳಲಿ ಅವರ ಪಕ್ಷದಲ್ಲಿ ಯಾರು ಉಳೀತಾರೆ, ಯಾರು ಹೋಗ್ತಾರೆ ಅಂತ ಗಮನಿಸಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಯಾರು ಬರ್ತಾರೆ ಡಿಕೆಶಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.