ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿ
ಡಿ.ಕೆ.ಶಿವಕುಮಾರ್ ನನ್ನ ವೈಯಕ್ತಿಕವಾಗಿ ಹಾಳು ಮಾಡಿದ್ದಾನೆ. ನನ್ನ ಹೆಸರು ಹಾಳು ಮಾಡಲು 40 ಕೋಟಿ ಖರ್ಚು ಮಾಡಿದ್ದಾನೆ ಅಂತಾ ಏಕವಚನದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, CD ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು. ಸಾಕಷ್ಟು ಜನರನ್ನು ಬ್ಲ್ಯಾಕ್‌ಮೇಲ್ ಮಾಡಲು ಸಿದ್ದತೆ ಮಾಡಿಕೊಂಡಿದ್ದಾನೆ. ನನ್ನ ಬಗ್ಗೆ ಡಿಕೆಶಿಗೆ ಹೆದರಿಕೆ ಇದೆ ಅಂತಾ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಕಿಡಿಕಾರಿದ್ರು.