ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಡಿ.ಕೆ. ಶಿವಕುಮಾರ್

ಸೋಮವಾರ, 7 ಆಗಸ್ಟ್ 2017 (12:32 IST)
ಆದಾಯ ತೆರಿಗೆ ಇಲಾಖೆ ದಾಳಿ ಬಳಿಕ 2 ದಿನಗಳಿಂದ ನಿರಾಳರಾಗಿದ್ದ ಸಚಿವ ಡಿ.ಕೆ. ಶಿವಕುಮಾರ್ ಇವತ್ತು ಮತ್ತೆ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಐಟಿ ಇಲಾಖೆ ಸಮನ್ಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿಗೆ ತೆರಳಿರುವ ಡಿಕೆಶಿ ವಿಚಾರಣೆಗೆ ಹಾಜರಾಗಿದ್ದಾರೆ. ಡಿ.ಕೆ. ಶಿವಕುಮಾರ್`ಗೆ ಸಹೋದರ ಡಿ.ಕೆ. ಸುರೇಶ್ ಸಹ ಸಾಥ್ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿನ  ವಶಪಡಿಸಿಕೊಂಡ ದಾಕಲೆ ಪತ್ರಗಳಿಗೆ ಸಂಬಂಧಪಟ್ಟಂತೆ ಐಟಿ ಅಧಿಕಾರಿಗಳು ಸ್ಪಷ್ಟನೆ ಮತ್ತು ದಾಖಲೆಗಳನ್ನನೀಡಬೇಕಿದೆ. ದಾಖಲೆಗಳು ಸರಿ ಎನಿಸಿದರೆ ವಶಪಡಿಸಿಕೊಂಡ ಸಂಪತ್ತನ್ನ ವಾಪಸ್ ನೀಡಲಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಮಾತನಾಡಿದ ಡಿ.ಕೆ. ಶಿವಕುಮಾರ್, ನಾನು ಧೈರ್ಯವಾಗಿದ್ದೇನೆ. ಯಾವುದಕ್ಕೂ ಹೆದರುವುದಿಲ್ಲ. ಐಟಿ ಅಧಿಕಾರಿಗಳಿಗೆ ಸಮರ್ಪಕ ಉತ್ತರ ಕೊಡುತ್ತೇನೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ಇರುವುದರಿಂದ ಗುಜರಾತ್ ಶಾಸಕರ ಜೊತೆ ಅಹಮದಾಬಾದ್`ಗೆ ತೆರಳಲು ಸಾಧ್ಯವಾಗಿಲ್ಲ. ಮುಂದೆ ತೆರಳುತ್ತೇನೆ ಎಂದು ಹೇಳಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ