ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತ ಮಾಡಬೇಡಿ: DFO ಹರ್ಷ ಬಾನು

ಬುಧವಾರ, 12 ಜನವರಿ 2022 (21:26 IST)
ಮುಂಬರುವ ಬಜೆಟ್ ದಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಕಡಿತವಾಗದಂತೆ ಕ್ರಮ‌ ವಹಿಸುವಂತೆ ಬೆಳಗಾವಿ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಬಾನು ಜಿಪಿ ಅರಣ್ಯ ಸಚಿವ ಉಮೇಶ ಕತ್ತಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ರಾಜ್ಯ ಸರಕಾರ ಕಳೆದ 8 ವರ್ಷಗಳಿಂದ ಬಜೆಟ್ ದಲ್ಲಿ ಅರಣ್ಯ ಇಲಾಖೆಗೆ ನೀಡುವ ಅನುದಾನದಲ್ಲಿ ಶೇಕಡಾ 8 ರಿಂದ 10 ರಷ್ಟು ಕಡಿತ ಮಾಡುತ್ತಿದ್ದು ಈ ಬಾರಿಯ ಬಜೆಟ್ ದಲ್ಲಿ ಅರಣ್ಯ ಇಲಾಖೆಯ ಅನುದಾನದಲ್ಲಿ ಯಾವುದೇ ಕಡಿತವಾಗದಂತೆ ಕ್ರಮ‌ ವಹಿಸುವಂತೆ ಮನವಿ ಮಾಡಿಕೊಂಡರು.ಇದಕ್ಕೆ ಸ್ಪಂದನೆ ನೀಡಿದ ಅರಣ್ಯ ಸಚಿವ ಉಮೇಶ ಕತ್ತಿ ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ‌ ಬಾರಿಯ ಬಜೆಟ್ ದಲ್ಲಿ ಅರಣ್ಯ ಇಲಾಖೆಯ ಅನುದಾನದ ಪಾಲಿನಲ್ಲಿ ಯಾವುದೇ ಕಡಿತಗೊಳಿಸದಂತೆ ಮನವಿ ಮಾಡುತ್ತೇನೆ ಹಾಗೂ ನಗರ ಪ್ರದೇಶಗಳಲ್ಲಿನ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಅರಣ್ಯ ಇಲಾಖೆಯ ಮುಖ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ ಸಾಲಿಮಠ, ವಲಯ ಅರಣ್ಯಾಧಿಕಾರಿ ಪ್ರಸನ್ನ ಬೆಲ್ಲದ, ಉಪ ವಲಯ ಅರಣ್ಯಾಧಿಕಾರಿ ಗಜಾನನ ಪಾಟೀಲ, ಪ್ರದೀಪ ಮಗದುಮ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ