ಕೆಲವು ಅತೃಪ್ತ ಶಾಸಕರು ಸದನಕ್ಕೆ ಗೈರು ಹಾಜರಾದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯ ಶಾಸಕರನ್ನು ಅನರ್ಹಗೊಳಿಸಿದಲ್ಲಿ ಸರ್ಕಾರಕ್ಕೆ ಬಹುಮತದ ಕೊರತೆ ಆಗಲಿದೆ. ಆಗ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಬಹುದೆಂದು ಹೇಳಲಾಗಿತ್ತು.
ಆದರೆ ಶಾಸಕಾಂಗ ಸಭೆ ಬಳಿಕ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ. ಪಕ್ಷದ ನಾಯಕರಾದ ರಾಮಲಾಲ್ ಅವರು ನಮಗೆ ಮಾರ್ಗದರ್ಶನ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ. ಸರ್ಕಾರದಲ್ಲಿ ಸಚಿವರು ಶಾಸಕರ ನಡುವೆ ಹೊಂದಾಣಿಕೆ ಇಲ್ಲವಾಗಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.