ನಮ್ಮ ಮೆಟ್ರೋದಲ್ಲಿ ಹಿಂದಿ ಬೇಡ: ಕೇಂದ್ರಕ್ಕೆ ಸಿಎಂ ಪತ್ರ

ಶುಕ್ರವಾರ, 28 ಜುಲೈ 2017 (16:23 IST)
ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಕುರಿತಂತೆ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಹಿಂದಿ ಬೇಡ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.
 
ನಮ್ಮ ಮೆಟ್ರೋಗೆ ಆರಂಭದಲ್ಲಿ ತ್ರಿಭಾಷಾ ಸೂತ್ರ ಅನುಸರಿಸಲಾಗಿತ್ತು. ಆದರೆ, ಹಿಂದಿ ಭಾಷೆ ಹೇರಿಕೆಯ ಬಗ್ಗೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.
 
ಹಿಂದಿ ರಾಷ್ಟ್ರಭಾಷೆಯಲ್ಲಿರುವ ನಾಮಫಲಕಗಳನ್ನು ತೆರುವುಗೊಳಿಸಿ, ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಮಾತ್ರ ನಾಮಫಲಕಗಳಿರಲಿವೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
 
ಹಿಂದಿ ಹೇರಿಕೆಯಿಂದ ರಾಜ್ಯದ ಸಂಸ್ಕ್ರತಿಗೆ ಧಕ್ಕೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಬರೆದ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ