ಮದುವೆಯಾಗುವುದಾಗಿ ನಂಬಿಸಿ ಹೀಗೆ ಮಾಡೋದ!?

ಸೋಮವಾರ, 21 ಫೆಬ್ರವರಿ 2022 (11:05 IST)
ಬೆಳಗಾವಿ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ವಂಚಿಸಿದ ಎಂದು ಯುವಕನ ವಿರುದ್ಧ ನೊಂದ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣಾ ಮೆಟ್ಟಿಲೇರಿಸಿದ್ದಾಳೆ.

ಬೆಳಗಾವಿ ಜಿಲ್ಲೆ ಗೋಕಾಕ್ನ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ವಸತಿ ನಿಲಯ ಬಾಡಿಗೆ ನೀಡಿದ್ದ ಕಟ್ಟಡ ಮಾಲೀಕನ ಪುತ್ರ ಆದರ್ಶ ಮಾಲದಿನ್ನಿ 2016ರ ಡಿಸೆಂಬರ್ 5ರಂದು ಅತ್ಯಾಚಾರವೆಸಗಿ,

ಫೋಟೋ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. 

ಇದಾದ ಬಳಿಕ ಈ ಸಂಬಂಧ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಮುಂದಾದಾಗ ಮದುವೆಯಾಗುತ್ತೇನೆ ಎಂದು ತನ್ನನ್ನು ನಂಬಿಸಿದ್ದನು. ಆದರೆ ಇದೀಗ ತನಗೆ ಮೋಸ ಮಾಡಿ ಬೇರೆ ಯುವತಿ ಜೊತೆ ಗೋಕಾಕ್ನಲ್ಲಿ ಮದುವೆಯಾಗಲು ಮುಂದಾಗಿದ್ದಾನೆ ಎಂದು ಯುವತಿ ತನ್ನ ಅಳಲನ್ನು ತೊಡಿಕೊಂಡಿದ್ದಾಳೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ