ಹಣ ಅವ್ಯವಹಾರ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ನಾಲ್ಕು ಬಾರಿ ವಿಚಾರಣೆಗೆ ಹಾಜರಾಗಿದ್ದರು. ಮಾಧ್ಯಮಗಳಲ್ಲಿ ಅವರು ತಾನು ಇಡಿ ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುತ್ತಿರುವುದಾಗಿ ಪದೇ ಪದೇ ಹೇಳುತ್ತಿದ್ದರು. ಆದರೆ, ತನಿಖೆಗೆ ಸರಿಯಾದ ಸಹಕಾರ ಸಿಗುತ್ತಿಲ್ಲವೆಂಬ ಕಾರಣವೊಡ್ಡಿಯೇ ಜಾರಿ ನಿರ್ದೇಶನಾಲಯದವರು ಡಿಕೆಶಿಯನ್ನು ಬಂಧಿಸಿರುವುದು ತಿಳಿದುಬಂದಿದೆ.
ಹೌದು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಸಂಬಂಧಿಸಿದ ಕೆಲವೊಂದಿಷ್ಟು ವಿಚಾರಗಳನ್ನು ಬಹಿರಂಗಪಡಿಸಿದ್ದು, ಅವರು ಕೇಳಿದ ಪ್ರಶ್ನೆಗಳಿಗೆ ಡಿಕೆಶಿ ಸರಿಯಾಗಿ ಉತ್ತರ ನೀಡುತ್ತಿರಲಿಲ್ಲವಂತೆ. ನನಗೆ ಗೊತ್ತಿಲ್ಲ? ನನಗೆ ನೆನಪಿಲ್ಲ? ಎಂಬ ಉತ್ತರ ನೀಡುತ್ತಿದ್ದರಂತೆ. ಆದಕಾರಣ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.