ಸಿಡಿಲಿಗೆ ಬಲಿಯಾದ ಕುರಿಗಳೆಷ್ಟು ಗೊತ್ತಾ?

ಮಂಗಳವಾರ, 25 ಸೆಪ್ಟಂಬರ್ 2018 (19:18 IST)
ಭಾರಿ ಮಳೆ ಹಾಗೂ ಸಿಡಿಲಿಗೆ ಬೆಲೆಬಾಳುವ ಕುರಿಗಳು ಸಾವನ್ನಪ್ಪಿದ್ದು, ಇದರಿಂದ ಕುರಿಗಾರ ಕಂಗಾಲಾಗುವಂತಾಗಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಡೋಣಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಡೋಣಗಾಂವ್ ಹೊರವಲಯದಲ್ಲಿ ಮೇಯಿಸಲು ಎಂದು ತೆಗೆದುಕೊಂಡಿದ್ದ ಕುರಿಗಳಲ್ಲಿ 20ಕ್ಕೂ ಹೆಚ್ಚು ಕುರಿಗಳು ಸಿಡಿಲಿಗೆ ಬಲಿಯಾಗಿವೆ.

ಇದರಿಂದ ಕುರಿಗಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಳೆದೆರಡು ದಿನಗಳಿಂದ ಹೈದ್ರಾಬಾದ್ ಕರ್ನಾಟಕ ಪ್ರದೇಶದ ಹಲವೆಡೆ ಭಾರಿ ಮಳೆ ಸುರಿಯುತ್ತಿದೆ. ಮಳೆಯಿಂದ ಜನಜೀವನ ಹಾಗೂ ಜಾನುವಾರುಗಳು ಪರಿತಪಿಸುವಂತಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ