ಕೋವಿಡ್ ಟೆಸ್ಟ್ ಮಾಡಿಸಿದ ಕುಮಾರಸ್ವಾಮಿ ವರದಿಯಲ್ಲಿ ಏನಿದೆ ಗೊತ್ತಾ?

ಮಂಗಳವಾರ, 22 ಸೆಪ್ಟಂಬರ್ 2020 (11:33 IST)
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೋವಿಡ್ ಟೆಸ್ಟ್ ಮಾಡಿಸಿದ್ದು, ಅದರ ವರದಿ ಇದೀಗ ಬಂದಿದೆ ಎಂಬುದಾಗಿ ತಿಳಿದುಬಂದಿದೆ.

ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಿದ್ದ ಹಿನ್ನಲೆಯಲ್ಲಿ ಕುಮಾರಸ್ವಾಮಿ ನಿನ್ನೆ ಹಾಸನದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಅದರ ವದರಿ ಇದೀಗ ಬಂದಿದ್ದು ಅದರಲ್ಲಿ ನೆಗೆಟಿವ್ ಬಂದಿದೆ ಎನ್ನಲಾಗಿದೆ.

ಕುಮಾರಸ್ವಾಮಿ ಹಾಸನದ ರೆಸಾರ್ಟ್ ನಲ್ಲಿ ಮೂರು ದಿನ ವಿಶ್ರಾಂತಿ ಪಡೆದಿದ್ದರು. ಆದರೆ ಇದೀಗ ಕೋವಿಡ್ ಟೆಸ್ಟ್ ನೆಗೆಟಿವ್ ಬಂದ ಹಿನ್ನಲೆಯಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ