ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು ಸುರಿಸಿದ ಬಗ್ಗೆ ಶೋಭಾ ಕರಂದ್ಲಾಜೆ ಹೇಳಿದ್ದೇನು ಗೊತ್ತಾ?
ಶುಕ್ರವಾರ, 30 ಅಕ್ಟೋಬರ್ 2020 (13:29 IST)
ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು ಸುರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಮತ ಪ್ರಚಾರ ಮಾಡಿದ ಅವರು ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ್ದಾರೆ. ಆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು ಸುರಿಸಿದ ವಿಚಾರದ ಬಗ್ಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಅಭಿವೃದ್ಧಿಗೆ ಆದ್ಯತೆ, ಭಾವನೆಗಳಿಗೆ ಅಲ್ಲ. ಅವರವರ ಮನೆಗಳಲ್ಲಿ ಏನೇನೋ ಘಟನೆಗಳು ನಡೆದಿರುತ್ತದೆ. ಅವುಗಳನ್ನು ಭಾವನಾತ್ಮಕವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.