ಬೆಂಗಳೂರಿನ ಯಾವ ಯಾವ ಕಡೆ ಕರ್ಫ್ಯೂ ಜಾರಿಯಿದೆ ಗೊತ್ತಾ?

ಮಂಗಳವಾರ, 13 ಸೆಪ್ಟಂಬರ್ 2016 (12:00 IST)
ಕಾವೇರಿ ಜೀವನದಿ ಹೋರಾಟ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ನಗರದ ಹಲವು ಪ್ರದೇಶಗಳಲ್ಲಿ ಪೊಲೀಸರು ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
 
ನಗರದ ನಂದಿನಿ ಲೇಔಟ್, ಜ್ಞಾನಭಾರತಿ ಪಿಎಸ್, ಆರ್‌ಎಂಸಿ ಯಾರ್ಡ್, ಪೀಣ್ಯ, ಮಹಾಲಕ್ಷ್ಮಿ ಲೇಔಟ್, ಯಶ್ವಂತಪುರ್, ಚಂದ್ರಾ ಲೇಔಟ್, ಕೆ.ಪಿ.ಅಗ್ರಹಾರ, ರಾಜರಾಜೇಶ್ವರಿ ನಗರ, ರಾಜಾಜಿನಗರ, ವಿಜಯನಗರ, ಕಾಮಾಕ್ಷಿ ಪಾಳ್ಯ, ರಾಜಗೋಪಾಲ ನಗರ, ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
 
ನಗರದಲ್ಲಿ ಉದ್ರಿಕ್ತ ಪ್ರತಿಭಟನಾಕಾರರು 100 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರದಲ್ಲಿ ತೊಡಗಿದ್ದರಿಂದ ನಗರಾದ್ಯಂತ ಸೆಪ್ಟೆಂಬರ್ 14 ರವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
 
ಪ್ರತಿಭಟನೆಯ ನೆಪದಲ್ಲಿ ಯಾವುದೇ ಕಾರಣಕ್ಕೂ ಹಿಂಸಾಚಾರ ಸಹಿಸುವುದಿಲ್ಲ ಎಂದು ಹೇಳಿರುವ ಬೆಂಗಳೂರು ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್, ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.  
   
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ