ಕಾರಿನ ಗಾಜು ಒಡೆದು ಕದ್ದದ್ದು ಏನು ಗೊತ್ತಾ?
ಗುರುವಾರ, 10 ಜನವರಿ 2019 (15:22 IST)
ಯುವಕರ ಗುಂಪೊಂದು ಕಾರಿನ ಗಾಜು ಒಡೆದು ಅಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಎಗರಿಸಿದ್ದಾರೆ.
ಕಾರಿನಲ್ಲಿದ್ದ ಲ್ಯಾಪ್ ಟಾಪ್ , ಪಾಸ್ ಪೋರ್ಟ್ ಗಳನ್ನು ದುಷ್ಕರ್ಮಿಗಳು ಕಳವು ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದಿದೆ .
ಹುಬ್ಬಳ್ಳಿಯಿಂದ ಬಂದಿದ್ದ ಖಾಸಗಿ ಕಂಪನಿಯೊಂದರ ಸಿಇಒ ನವೀನ್ ಝಾ ಅವರು ಗಾಂಧಿ ಬಜಾರ್ ನ ರಾಘವೇಂದ್ರ ಸ್ವಾಮಿ ಮಠದ ಬಳಿ ಕಾರನ್ನು ನಿಲ್ಲಿಸಿ , ಶಾಪಿಂಗ್ ಗೆ ಹೋಗಿ ಮರಳಿ ರಾತ್ರಿ 9 ರ ವೇಳೆ ವಾಪಸ್ ಕಾರಿನ ಬಳಿ ಬಂದಾಗ ಕಾರಿನ ಕಿಟಕಿ ಗಾಜುಗಳನ್ನು ಒಡೆದು , ಕಾರಿನಲ್ಲಿಟ್ಟಿದ್ದ ಲ್ಯಾಪ್ ಟಾಪ್ , ಪಾಸ್ ಪೋರ್ಟ್ ಗಳನ್ನು ದುಷ್ಕರ್ಮಿಗಳು ಕದ್ದೊಯ್ದಿರುವುದು ಬೆಳಕಿಗೆ ಬಂದಿದೆ .
ಪೊಲೀಸ್ ಠಾಣೆಯಿಂದ ಸುಮಾರು 300ಮೀಟರ್ ದೂರದಲ್ಲಿಯೇ ಕಾರನ್ನು ಪಾರ್ಕ್ ಮಾಡಲಾಗಿದೆ . ಜನನಿಬಿಡ ಪ್ರದೇಶದಲ್ಲಿಯೇ ಕಳ್ಳರು ಈ ದುಷ್ಕೃತ್ಯವೆಸಗಿದ್ದಾರೆ ಎಂದು ನವೀನ್ ತಿಳಿಸಿದ್ದಾರೆ .
ತಕ್ಷಣ ಪೊಲೀಸ್ ಠಾಣೆಗೆ ತೆರಳಿದ ನವೀನ್ ಝಾ , ಘಟನೆ ಕುರಿತು ದೂರು ದಾಖಲಿಸಿದ್ದಾರೆ . ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮಾರವನ್ನು ಪರಿಶೀಲನೆ ನಡೆಸಿರುವ ಪೊಲೀಸರಿಗೆ ನಾಲ್ಕರಿಂದ ಐದು ಜನರ ಯುವಕರ ಗುಂಪೊಂದು ಈ ಕೃತ್ಯ ನಡೆಸಿರುವುದು ಕಂಡುಬಂದಿದ್ದು ಅವರಿಗಾಗಿ ಶೋಧ ನಡೆಸಿದ್ದಾರೆ .
ಆ್ಯಪ್ನಲ್ಲಿ ವೀಕ್ಷಿಸಿ x