ಕೊಡಗು ಸಂತ್ರಸ್ಥರಿಗೆ ಸಿಎಂ ಮಾಡಿದ್ದೇನು ಗೊತ್ತಾ?

ಶುಕ್ರವಾರ, 7 ಡಿಸೆಂಬರ್ 2018 (18:42 IST)
ಪ್ರಕೃತಿ ವಿಕೋಪಕ್ಕೆ ಗುರಿಯಾಗಿ, ವಿಪರೀತ ಮಳೆಯಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ನೆರವಿಗೆ ಸಿಎಂ ಮುಂದಾಗಿದ್ದಾರೆ.

ಪ್ರಕೃತಿ ವಿಕೋಪದಲ್ಲಿ‌ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಯೋಜನೆಗೆ ಸಿಎಂ ಚಾಲನೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಜಂಬೂರುಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ
ಮನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಗರಗಂದೂರಿನ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಿರ್ಮಿಸಿದ್ದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ,
ಬಳಿಕ ಮನೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ