ಲಾಕ್ ಡೌನ್ ಉಲ್ಲಂಘಿಸಿದವರಿಗೆ ಪೊಲೀಸರು ಮಾಡಿದ್ದೇನು ಗೊತ್ತಾ?
ಭಾನುವಾರ, 19 ಏಪ್ರಿಲ್ 2020 (16:05 IST)
ಲಾಕ್ ಡೌನ್ ಉಲ್ಲಂಘನೆ ಮಾಡಿದ 31 ಜನರನ್ನು ಬಂಧನ ಮಾಡಲಾಗಿದೆ.
ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸರ್ಕಾರದ ಆದೇಶದಂತೆ ಯಾದಗಿರಿ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಇಲ್ಲಿಯವರೆಗೆ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 31 ಜನರನ್ನು ಬಂಧಿಸಲಾಗಿದ್ದು, ಒಟ್ಟು 43 ಎಫ್.ಐ.ಆರ್ ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಗಡಿ ಭಾಗದಲ್ಲಿ ಸ್ಥಾಪಿಸಿರುವ ಒಟ್ಟು 16 ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿ ಅನವಶ್ಯಕವಾಗಿ ಓಡಾಡುತ್ತಿದ್ದವರ ಒಟ್ಟು 1,283 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇಲ್ಲಿಯವರೆಗೆ 7,71,100 ರೂಪಾಯಿ ದಂಡ ವಿಧಿಸಲಾಗಿದೆ ಎಂದಿದ್ದಾರೆ.