ಪ್ರೇಯಸಿ ಗರ್ಭಿಣಿ ಎಂದು ತಿಳಿದ ತಕ್ಷಣ ಪೊಲೀಸ್ ಅಧಿಕಾರಿಯ ಮಗ ಮಾಡಿದ್ದೇನು ಗೊತ್ತಾ?

ಬುಧವಾರ, 11 ಸೆಪ್ಟಂಬರ್ 2019 (10:50 IST)
ಕಲಬುರಗಿ : ಪೊಲೀಸ್ ಅಧಿಕಾರಿಯ ಮಗನೊಬ್ಬ ಯುವತಿಯೊಬ್ಬಳನ್ನು ಪ್ರೀತಿಸಿ, ಗರ್ಭಿಣಿ ಮಾಡಿದ್ದಲ್ಲದೆ ಆಕೆಗೆ ಬಲವಂತವಾಗಿ ಗರ್ಭಪಾತ ಮಾಡಿಸಿ ಕೊಲೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ರಾಜು ಪೂಜಾರಿ ಇಂತಹ ನೀಚ ಕೃತ್ಯ ಎಸಗಿದ ವ್ಯಕ್ತಿ. ಈತ ಕಲಬುರಗಿ ಫೈನ್ ಆರ್ಟ್ ಕಾಲೇಜಿನಲ್ಲಿ ಎರಡನೇ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿಯೊಬ್ಬಳನ್ನು ಲವ್ ಮಾಡಿ ಗರ್ಭಿಣಿ ಮಾಡಿದ್ದನು. ಯುವತಿ ಗರ್ಭಿಣಿ ಆಗಿರುವ ವಿಚಾರ ತಿಳಿದು ಬಲವಂತವಾಗಿ ಅಬಾರ್ಷನ್ ಮಾಡಿಸುವುದಕ್ಕೆ ಮುಂದಾಗಿದ್ದನು. ಆ ವೇಳೆ ಯುವತಿಗೆ ಹೇವಿ ಡೋಸ್ ಇಂಜೆಕ್ಷನ್ ಕೊಡಿಸಿದ ಹಿನ್ನಲೆಯಲ್ಲಿ ಗರ್ಭಪಾತದ ವೇಳೆ ಯುವತಿ ಮೃತಪಟ್ಟಿದ್ದಾಳೆ.

 ಬಳಿಕ ಈತ ತೆಲಂಗಾಣದ ಜಹಿರಬಾದ್ ನ ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆ ಬದಿ ಗುಂಡಿ ತೋಡಿ ಪೆಟ್ರೋಲ್ ಹಾಕಿ ಯುವತಿಯನ್ನು ಸುಟ್ಟು ಹಾಕಿದ್ದಾನೆ. ಇತ್ತ ಮಗಳು ನಾಪತ್ತೆಯಾದ ಹಿನ್ನಲೆಯಲ್ಲಿ ಆಕೆಯ ಪೋಷಕರು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಯ ವೇಳೆ ಪೊಲೀಸರು ಆರೋಪಿ ರಾಜು ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಯುವತಿಯನ್ನು ಕೊಲೆ ಮಾಡಿ ಸುಟ್ಟು ಹಾಕಿರುವುದಾಗಿ ಬಾಯಿಬಿಟ್ಟಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ