ಆಪರೇಷನ್ ಕಮಲ ನಡೆಯುವುದು ಎಲ್ಲೆಲ್ಲಿ ಗೊತ್ತಾ?

ಬುಧವಾರ, 12 ಸೆಪ್ಟಂಬರ್ 2018 (18:43 IST)
ರಾಜ್ಯದ ಸಮ್ಮಿಶ್ರ ಸರಕಾರ ಆಗ ಪತನವಾಗುತ್ತದೆ. ಈಗ ಪತನವಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಇದಕ್ಕೆ ಇಂಬು ಕೊಡುವಂತೆ ತೆರೆಮರೆಯಲ್ಲಿ ಆಪರೇಷನ್ ಕಮಲ ಮತ್ತೆ ನಡೆಯುತ್ತಿದೆ.

ರಾಜ್ಯದ ರಾಜಕೀಯದಲ್ಲಿ ಭಾರೀ ಬದಲಾವಣೆ ಗಾಳಿ ಬೀಸುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೊದಲಿಗಿಂತಲೂ ಹೆಚ್ಚಾಗಿ ಈಗ ರಾಜಕೀಯ ದಾಳ ಉರುಳಿಸುವುದರಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ ಹೇಗಾದರೂ ಸರಿ ಅಧಿಕಾರಕ್ಕೆ ಬರಬೇಕು. ಬಿಜೆಪಿ ಸರಕಾರ ಆಡಳಿತಕ್ಕೆ ತರಬೇಕು ಎಂದು ಪಣತೊಟ್ಟಿದ್ದು, ಅದಕ್ಕಾಗಿ ತೆರೆಮರೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ.

ಹಳೆ ಮೈಸೂರು ಹಾಗೂ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಬಲವಾಗಿವೆ. ಹೀಗಾಗಿ ಮೈಸೂರು ಪ್ರದೇಶ ಹೊರತುಪಡಿಸಿ ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿರುವ ಲಿಂಗಾಯತ ಶಾಸಕರನ್ನು ಬಿಜೆಪಿಗೆ ಸೆಳೆಯುವ ಯತ್ನ ಬಿಜೆಪಿ ನಡೆಸಿದೆ. ಹೀಗಾಗಿ ಹೈ-ಕ ಪ್ರದೇಶ ಮತ್ತು ಉತ್ತರ ಕರ್ನಾಟಕದತ್ತ ಬಿ.ಎಸ್.ವೈ ಹೆಚ್ಚಾಗಿ ಚಿತ್ತ ಹರಿಸಿದ್ದಾರೆ ಎನ್ನಲಾಗಿದೆ.

ಮೈಸೂರು ಭಾಗದಲ್ಲಿ ಜೆಡಿಎಸ್-ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆಗೆ ಮುಂದಾದರೂ ಅದಕ್ಕೆ ಬಿಜೆಪಿ ವರಿಷ್ಠರು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ. ಏಕೆಂದರೆ ಉಪ ಚುನಾವಣೆಯಲ್ಲಿ ಗೆಲುವು ಕಷ್ಟ ಎಂಬುದು ವರಿಷ್ಠರ ಲೆಕ್ಕಾಚಾರವಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ