ನಾರಿಮನ್ ಮುನಿಸಿಕೊಳ್ಳಲು ಕಾರಣ ಯಾರು ಗೊತ್ತೆ?

ಮಂಗಳವಾರ, 4 ಅಕ್ಟೋಬರ್ 2016 (12:59 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರ ವಾದಿಸುವ ವಕೀಲ ಫಾಲಿ ಎಸ್ ನಾರಿಮನ್ ಮುನಿಸಿಕೊಳ್ಳಲು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಅವರೇ ಪರೋಕ್ಷ ಕಾರಣ ಎಂದು ಹೇಳಲಾಗುತ್ತಿದೆ.
ಕಾವೇರಿ ವಿಚಾರದಲ್ಲಿ ನಾರಿಮನ್ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದರು. ಈ ವಿಚಾರಗಳನ್ನು ಸಚಿವ ಎಂ.ಬಿ.ಪಾಟೀಲ ಅವರು ನಾರಿಮನ್ ಅವರ ಗಮನಕ್ಕೆ ತಂದಿದ್ದರು. ಹೀಗಾಗಿ ಅವರು ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಸದನದಲ್ಲಿ ಆಡಿರುವ ಮಾತುಗಳಿಂದ ನನ್ನ ಮನಸ್ಸಿಗೆ ಬೇಸರವಾಗಿದೆ. ಇನ್ನು ಮುಂದೆ ನಾನು ಕರ್ನಾಟಕ ಪರ ವಾದಿಸುವುದಿಲ್ಲ. ಕಾವೇರಿ ವಿಚಾರದಲ್ಲಿ ವಾದಿಸುವಂತೆ ಯಾರು ನನ್ನ ಮನೆ ಗೇಟ್ ಬಳಿ ಬರುವುದು ಬೇಡ ಎಂದು ನಾರಿಮನ್ ಹೇಳಿದ್ದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ರಾಜ್ಯದ ಪರ ಫಾಲಿ ನಾರಿಮನ್ ಅವರೇ ವಾದ ಮಂಡಿಸಬೇಕು ಎಂದು ಅವರ ಮನವೊಲಿಸುವ ಯತ್ನ ನಡೆದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ