ಟಿಪ್ಪು ಜಯಂತ್ಯುತ್ಸವದಲ್ಲಿ ಪಾಲ್ಗೊಳ್ಳದ ಸಿಎಂ ಹೇಳಿದ್ದೇನು ಗೊತ್ತಾ?

ಶನಿವಾರ, 10 ನವೆಂಬರ್ 2018 (17:00 IST)
ರಾಜ್ಯಾದ್ಯಂತ ಆಚರಣೆ ಮಾಡಲಾಗುತ್ತಿರುವ ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳದ ಹಿನ್ನೆಲೆಯಲ್ಲಿನ ಕಾರಣವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಟಿಪ್ಪು ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಗೈರು ಹಾಜರಾಗಿರುವುದರಿಂದ ಅದಕ್ಕೆ ವಿಶೇಷವಾದ ಅರ್ಥವನ್ನು ಕಲ್ಪಿಸುವುದು ಬೇಡ. ವೈದ್ಯರು ಸಲಹೆ ಮಾಡಿದ್ದರಿಂದಾಗಿ ತಾವು ವಿಶ್ರಾಂತಿ ಪಡೆದುಕೊಳ್ಳುತ್ತಿರುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ.

ಮೂಢನಂಬಿಕೆಗಳನ್ನು ವಿರೋಧ ಮಾಡುವೆ ಎಂದಿರುವ ಅವರು, ಅಧಿಕಾರ ಕಳೆದುಕೊಳ್ಳುವ ಭೀತಿಯಿಂದಾಗಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಗೈರು ಹಾಜರಾಗಿದ್ದಾಗಿ ವರದಿಗಳು ಕೇಳಿಬರುತ್ತಿರುವುದು ಸತ್ಯಕ್ಕೆ ದೂರವಾಗಿದೆ ಎಂದರು.

ರಾಜ್ಯದ ಜನತೆಗೆ ಟಿಪ್ಪು ಸುಲ್ತಾನ್ ಜಯಂತ್ಯುತ್ಸವದ ಶುಭ ಕೋರಿರುವ ಸಿಎಂ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ರವರ ಆಡಳಿತ ಸುಧಾರಣೆಯ ಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಬಣ್ಣಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ