ಅಧಿಕಾರಿಗಳಿಗೆ ಗ್ರಾಮಸ್ಥರು ಚಳಿ ಬಿಡಿಸಿದ್ದು ಹೇಗೆ ನೋಡಿದ್ರಾ?
ಆ ಗ್ರಾಮಸ್ಥರು ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಬೆವರಿಳಿಸಿದ ಘಟನೆ ನಡೆದಿದೆ.
ಗ್ರಾಮ ಸಭೆಯಲ್ಲಿ ಪಿಡಿಓ ಹಾಗೂ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ.
ಗ್ರಾಮಸ್ಥರಿಗೆ ಮಾಹಿತಿ ನೀಡದೆ ಗ್ರಾಮ ಸಭೆ ನಡೆಸಲು ಮುಂದಾಗಿದ್ದರಿಂದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಳ್ಳಲಾಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ ನೋಡಲ್ ಅಧಿಕಾರಿ ವಿರುದ್ಧವೂ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಸಭೆ ಮುಂದೂಡುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಸಭೆ ಬಗ್ಗೆ ಗ್ರಾಮ ಪಂಚಾಯತಿ ಸದಸ್ಯರಿಗೂ ಮಾಹಿತಿ ನೀಡಲ್ಲ ಎಂದು ಆರೋಪಿಸಿದ್ದಾರೆ ಗ್ರಾಮ ಪಂಚಾಯಿತಿ ಸದಸ್ಯರು.
ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಗ್ರಾಮಸ್ಥರನ್ನು ಸಮಾಧಾನ ಪಡೆಸಲೆತ್ನಿನಿಸಿದರು.