ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿಯೇ ಮಾಡ್ತೇವೆ : ಮಧು ಬಂಗಾರಪ್ಪ
ಭಾನುವಾರ, 4 ಜೂನ್ 2023 (13:25 IST)
ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಿಜೆಪಿ ಜಾರಿಗೆ ತಂದ ಇತಿಹಾಸ ತಿರುಚಿದ ಪಠ್ಯ ಪುಸ್ತಕವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದ್ದೆವು. ಆ ಕೆಲಸವನ್ನು ಈಗ ಮಾಡಿಯೇ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ತಿರುಚಲು ಹೊರಟಿತ್ತು. ಆದರೆ ನಮ್ಮ ಸರಕಾರ ಆ ರೀತಿ ಮಾಡದೇ ಇರುವ ಸತ್ಯವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತೇವೆ. ಪಠ್ಯ ಪುಸ್ತಕ ಪರಿಷ್ಕರಣೆಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುತುವರ್ಜಿ ವಹಿಸಿದ್ದಾರೆ ಎಂದಿದ್ದಾರೆ.
ಮುಖ್ಯಮಂತ್ರಿ ಅವರ ನೇತೃತ್ವದಲ್ಲಿಯೇ ಪರಿಷ್ಕರಣೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಹಲವು ತಜ್ಞರು, ಸಾಹಿತಿಗಳ ಚರ್ಚೆ ನಡೆಸಿದ್ದೇವೆ. ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಚರ್ಚಿಸಲು ಸೋಮವಾರ ಸಂಜೆ ಭೇಟಿಯಾಗಲು ಮುಖ್ಯಮಂತ್ರಿ ಅವರು ಸಮಯ ನಿಗದಿ ಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.