
	ಕಲಬುರಗಿಯಲ್ಲಿ ಕೊರೊನಾ ಸೋಂಕಿನಿಂದ ಸಾವನಪ್ಪಿದ ವೃದ್ಧನಿಗೆ ಮಾರ್ಚ್ 6ರಿಂದ ಮಾರ್ಚ್ 9ರ ತನಕ ಈ ವೈದ್ಯ ಚಿಕಿತ್ಸೆ ನೀಡಿದ್ದರು. ಇದೀಗ ಈ ವೈದ್ಯನಿಗೂ ಕೊರೊನಾ ಸೋಂಕು ತಗುಲಿದ್ದು, ವೈದ್ಯನಿಗೆ  ಇಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೇ  ವೈದ್ಯನ ಕುಟುಂಬಸ್ಥರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ. 
 
		
