ವೈದ್ಯರ ಮೇಲೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಚಿವ ರಮೇಶ್ ಕುಮಾರ್

ಮಂಗಳವಾರ, 10 ಜನವರಿ 2017 (14:07 IST)
ವೈದ್ಯರು ನನ್ನ ಇಲಾಖೆ ಕುಟುಂಬದವರು. ಅವರ ಮೇಲೆ ಹಲ್ಲೆ ಸಡೆಸಿದರೆ ನಾನು ಸುಮ್ಮನೆ ಕೂರಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳತ್ತೇನೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ್ ಕುಮಾರ್ ಹೆಗಡೆ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಕುರಿತು ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದೇನೆ. ವೈದ್ಯರ ಮೇಲಿನ ಹಲ್ಲೆ ಅಮಾನಷ ಕೃತ್ಯ. ಇನ್ನು ಶಾಸಕ ರಾಜು ಕಾಗೆ ಮಾಡಿದ್ದು ಸರಿಯಲ್ಲ. ಯಾರೇ ತಪ್ಪು ಮಾಡಿದರು ತಪ್ಪು ತಪ್ಪೇ. ವರದಿ ನೋಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. 
 
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳಿಗೆ ವೈದ್ಯರು ಪರಿಶೀಲಿಸುತ್ತಿದ್ದರು. ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. 
 
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಬ್ಬರೂ ವೈದ್ಯರಿಗೆ ರಕ್ತ ಬರುವಂತೆ ಹಲ್ಲೆ ಮಾಡಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ