ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಇಂದು ದೇಶದಾದ್ಯಂತ ವೈದ್ಯರ ಮುಷ್ಕರ

ಸೋಮವಾರ, 17 ಜೂನ್ 2019 (10:18 IST)
ಬೆಂಗಳೂರು : ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು  ದೇಶದಾದ್ಯಂತ ವೈದ್ಯಕೀಯ ಸಂಸ್ಥೆಗಳು ಪ್ರತಿಭಟನೆಗೆ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಎಲ್ಲ ಆಸ್ಪತ್ರೆಗಳ ಓಪಿಡಿ ಬಂದ್ ಆಗಿದೆ.




ಇಂದು ಬೆಳಗ್ಗೆ 6 ಗಂಟೆಯಿಂದ ಜೂನ್ 18 ರ ಬೆಳಗ್ಗೆ 6 ಗಂಟೆ ತನಕ ವೈದ್ಯರು ಪ್ರತಿಭಟನೆ ನಡೆಸಲಿದ್ದು ಕರ್ನಾಟಕದ ವೈದ್ಯರು ಕೂಡ ‘ಸೇವ್ ಡಾಕ್ಟರ್ಸ್’ ಘೋಷಣೆಯಡಿ ಪ್ರತಿಭಟನೆಗೆ ಸಾಥ್ ಕೊಡಲಿದ್ದಾರೆ ,ಆದಕಾರಣ  ರಾಜ್ಯದ್ಯಾಂತ ಸುಮಾರು 4500 ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ ಆಗಲಿದೆ. ಇದರಿಂದ ರೋಗಿಗಳಿಗೆ ತೊಂದರೆಯುಂಟಾಗುವ ಸಂಭವವಿದೆ.


ಹಾಗೇ ವೈದ್ಯರು  ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದು, ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕು. ವೈದ್ಯರ ಮೇಲೆ ಹಲ್ಲೆ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾನೂನು ಜಾರಿಗೆ ತರಬೇಕು. ಕಾನೂನು ಉಲ್ಲಂಘನೆ ಮಾಡಿದವರಿಗೆ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಬೇಕು. ಆಸ್ಪತ್ರೆಗಳಿಗೆ ಮೂಲ ಸೌಲಭ್ಯ ಕಲ್ಪಿಸಬೇಕು. ಹಾಗೂ ಪೊಲೀಸ್ ಸಿಬ್ಬಂದಿ ನೇಮಿಸಬೇಕು. ಅಲ್ಲದೇ ಸಿಎಂ ಮಮತಾ ಬ್ಯಾನರ್ಜಿ ವೈದ್ಯರಲ್ಲಿ ಬಹಿರಂಗ ಕ್ಷಮೆಯಾಚನೆ ಮಾಡಬೇಕು ಎಂಬುದು ವೈದ್ಯರು ಬೇಡಿಕೆಯಿಟ್ಟಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ