ಜಾತಿಗಣತಿ ಜೊತೆಗೆ ಈ ಮಹತ್ವದ ಕೆಲಸವೂ ನಡೆಯಲಿದೆ: ಮೊಬೈಲ್, ಆಧಾರ್ ರೆಡಿ ಇಟ್ಕೊಳ್ಳಿ

Krishnaveni K

ಸೋಮವಾರ, 15 ಸೆಪ್ಟಂಬರ್ 2025 (15:02 IST)
ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸಲುದ್ದೇಶಿಸಿರುವ ಜಾತಿ ಗಣತಿ ಜೊತೆ ಈ ಒಂದು ಮಹತ್ವದ ಕೆಲಸವೂ ನಡೆಯಲಿದೆ. ಅದಕ್ಕಾಗಿ ನಿಮ್ಮ ಮೊಬೈಲ್, ಆಧಾರ್ ರೆಡಿ ಮಾಡಿಟ್ಟುಕೊಳ್ಳಬೇಕು.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು’ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಹೀಗಾಗಿ ಸಮೀಕ್ಷೆಗೆ ಬರುವವರಿಗೆ ನಿಮ್ಮ ಜಾತಿ, ಶಿಕ್ಷಣ, ಸಾಮಾಜಿಕ ಸ್ಥಿತಿಗತಿಯ ಮಾಹಿತಿ ಜೊತೆಗೆ ಪಡಿತರ ಚೀಟಿ, ಆಧಾರ್ ಕಾರ್ಡ್ ಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡುವ ಕೆಲಸವೂ ನಡೆಯಲಿದೆ. ಹೀಗಾಗಿ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

‘ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಾಗರಿಕರು ಬೆಂಬಲ ಕೊಟ್ಟು ಸಹಕರಿಸಬೇಕು. ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ