ಕಿರುಕುಳ ನೀಡುವುದು ನಿಮಗೆ ಶೋಭೆ ತರುತ್ತದೆಯೇ?: ಪೊಲೀಸರಿಗೆ ಬಿಎಸ್‌ವೈ ವಾರ್ನಿಂಗ್

ಗುರುವಾರ, 15 ಜೂನ್ 2017 (18:51 IST)
ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಮೇಲೆ ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸರಕಾರ ಸೇಡಿನ ಭಾವನೆಯಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.  
 
ಕಿರುಕುಳ ನೀಡುವುದು ನಿಮಗೆ ಶೋಭೆ ತರುತ್ತದೆಯೇ. ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಅಧಿಕಾರಿಗಳ ಪಟ್ಟಿ ನನ್ನ ಬಳಿಯಿದೆ. ಟೈಮ್ ಬಂದಾಗ ತಕ್ಕ ಪಾಠ ಕಲಿಸುತ್ತೇನೆ ಎಂದು ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. 
 
ಕಾಂಗ್ರೆಸ್ ಸರಕಾರ ಹೋದರೂ ನೀವು ಉದ್ಯೋಗದಲ್ಲಿ ಮುಂದುವರಿಯಬೇಕಾಗುತ್ತದೆ. ಇನ್ಮುಂದಾದರೂ ತಪ್ಪುಗಳನ್ನು ತಿದ್ದಿಕೊಂಡು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ