‘ಮತ್ತೊಂದು ಮಸೀದಿ ಕಳೆದುಕೊಳ್ಳಲು ಬಯಸಲ್ಲ’

ಶುಕ್ರವಾರ, 13 ಮೇ 2022 (18:23 IST)
ವಾರಾಣಸಿಯ ಜ್ಞಾನವ್ಯಾಪಿ ಮಸೀದಿಯ ಕುರಿತು ನ್ಯಾಯಾಲಯ ನೀಡಿರುವ ತೀರ್ಪು 1991ರ ಆರಾಧನಾ ಸ್ಥಳಗಳ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಕೋರ್ಟ್ ಆದೇಶವು 1991ರ ಆರಾಧನಾ ಸ್ಥಳದ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಬಾಬ್ರಿ ಮಸೀದಿ ಭೂ ವಿವಾದ ಕುರಿತಾಗಿ ಸುಪ್ರೀಂಕೋರ್ಟ್ ನೀಡಿದ ಆದೇಶದ ಉಲ್ಲಂಘನೆಯಾಗಿದೆ. ಬಾಬ್ರಿ ಮಸೀದಿ ಬಳಿಕ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ತಾವು ಬಯಸಿಲ್ಲ ಎಂದು ತಿಳಿಸಿದ್ದಾರೆ.ಇದು ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಮಸೀದಿ ಸಮಿತಿಗಳು ಸುಪ್ರೀಂಕೋರ್ಟ್‌ಗೆ ಹೋಗಲಿವೆ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ