ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು
ಸತೀಶ್ 50 ಕೋಟಿ ರೂ. ಕೊಟ್ಟು ಶ್ವಾನವೊಂದನ್ನು ಖರೀದಿ ಮಾಡಿರುವಿದಾಗಿ ಹೇಳಿಕೊಂಡಿದ್ದರು. ಕಾಡು ತೋಳ ಮತ್ತು ಕಕೇಶಿಯನ್ ಶೆಫರ್ಡ್ ತಳಿಯ ಮಿಶ್ರಣವಾಗಿರುವ ಇದನ್ನು ತೋಳನಾಯಿ ಎಂದೂ ಕರೆಯುತ್ತಾರೆ. ಸತೀಶ್ ಅವರು ವಿವಿಧ ತಳಿಯ ನಾಯಿಗಳನ್ನು ವಿದೇಶಗಳಿಂದ ಸಂಗ್ರಹಿಸುವ ಮೂಲಕ ಭಾರೀ ಖ್ಯಾತಿಯನ್ನು ಗಳಿಸಿದ್ದಾರೆ. ದುಬಾರಿ ಬೆಲೆಯ ನಾಯಿಗಳನ್ನು ಸಾಕಿ, ಈ ಮೂಲಕನೇ ಸುದ್ದಿಯಲ್ಲಿರುವ ಸತೀಶ್ ಅವರು ಬೆಂಗಳೂರಿನವರು.
ಇನ್ನೂ ಹಲವು ಕಾರ್ಯಕ್ರಮಗಳಲ್ಲೂ ತಮ್ಮ ನಾಯಿಗಳನ್ನು ಕರೆತರುತ್ತಾರೆ.