ನಾನೇ ಅಭ್ಯರ್ಥಿ ಎಂದರೆ ಕಾಂಗ್ರೆಸ್ ನಾಯಕರಿಗೆ ಕಾದಿದೆ ಗ್ರಹಚಾರ

ಗುರುವಾರ, 25 ಮೇ 2017 (08:55 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿಯಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರು ನಾನೇ ಮುಂದಿನ ನಾಯಕ ಎಂದು ಬಿಂಬಿಸಿಕೊಳ್ಳುವುದು ಸಾಮಾನ್ಯ. ಆದರೆ ಹಾಗೆ ಮಾಡಿದರೆ ಜೋಕೆ ಎಂದು ಕಾಂಗ್ರೆಸ್ ನಾಯಕರಿಗೆ ರಾಜ್ಯ ಉಸ್ತುವಾರಿ ವೇಣುಗೋಪಾಲ್ ತಾಕೀತು ಮಾಡಿದ್ದಾರೆ.

 
ಹಾಲಿ ಸಚಿವರು ಮತ್ತು ಶಾಸಕರೂ ಸೇರಿದಂತೆ ಕಾಂಗ್ರೆಸ್ ನಾಯಕರು ಮುಂದಿನ ಅಭ್ಯರ್ಥಿ ನಾನೇ  ಎಂದು ಬಹಿರಂಗವಾಗಿ ಹೇಳಿಕೊಳ್ಳುವಂತಿಲ್ಲ. ಯಾರಿಗೂ ಟಿಕೆಟ್ ಕೊಡುವ ಭರವಸೆ ಕೊಡುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ.

ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆ ನಡೆಸುತ್ತಿರುವ ಅವರು ಪಕ್ಷವನ್ನು ಮುಂದಿನ ಚುನಾವಣೆಗೆ ಸಜ್ಜುಗೊಳಿಸುವ ತಯಾರಿಯಲ್ಲಿದ್ದಾರೆ. ಇನ್ನು ರಿಯಲ್ ಎಸ್ಟೇಟ್ ಉದ್ಯಮಿಗಳನ್ನೂ ಪಕ್ಷದಿಂದ ದೂರವಿಡಬೇಕು ಎಂದು ಆದೇಶಿಸಿದ್ದಾರೆ.

ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡವರ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ದೂರು ನೀಡಲಾಗುವುದು. ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವೇಣುಗೋಪಾಲ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ