ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ- ಸಿಎಂ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಚಲುವರಾಯಸ್ವಾಮಿ
ಶನಿವಾರ, 29 ಜೂನ್ 2019 (11:45 IST)
ಮಂಡ್ಯ : ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಸಿಎಂ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಕಣಕ್ಕಿಳಿದ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪರಜಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಮಗನ ಸೋಲಿನ ನಂತ್ರ ಸಿಎಂ ಮಂಡ್ಯ ಜಿಲ್ಲೆ ಕಡೆಗಣಿಸುತ್ತಿದ್ದಾರಾ? ಎಂದು ಮಾಜಿ ಸಚಿವ ಚಲುವರಾಯಸ್ವಾಮಿಗೆ ಅನುಮಾನ ವ್ಯಕ್ತವಾಗಿದೆ.
ಆದ ಕಾರಣ ವೈಯಕ್ತಿಕ ಕಾರಣ ಏನೇ ಇರಲಿ ಮಂಡ್ಯ ಜಿಲ್ಲೆ ಕಡೆಗಣಿಸಬೇಡಿ ಎಂದು ಸಿಎಂ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಚಲುವರಾಯಸ್ವಾಮಿ.