ಗಾಬರಿ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಡಿ : ಶಿವಕುಮಾರ್

ಸೋಮವಾರ, 29 ಮೇ 2023 (11:47 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಸ್ಕೀಂ ಬಗ್ಗೆ ಪ್ರತಿನಿತ್ಯ ಚರ್ಚೆಯಾಗುತ್ತಿದ್ದು, ಈ ಸಂಬಂಧ ಗಾಬರಿಯಾಗುವುದು ಬೇಡ. ಯಾರೂ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಮದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
 
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಗ್ಯಾರಂಟಿ ಸ್ಕೀಂ ಜಾರಿ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದರು. ಯಾರು ಗಾಬರಿ ಆಗೋದು ಬೇಡ, ಊಹಾಪೋಹಗಳಿಗೆ ಕಿವಿಗೊಡೋದು ಬೇಡ. ನಾವು ಏನ್ ಹೇಳಿದ್ದೇವೆ ಅದನ್ನ ಮಾಡ್ತೀವಿ ಎಂದು ಭರವಸೆ ನೀಡಿದರು.

ಅಲ್ಲದೆ ಯಾರು ಬೇಕಾದರೂ ಚರ್ಚೆ ಮಾಡಲಿ. ಬೈಯೋರು ಬೈಯಲಿ. ಎಲ್ಲರಿಗೂ ಮಾತಾಡೋಕೆ ವಾಕ್ ಸ್ವಾತಂತ್ರ್ಯ ಇದೆ ಎಂದು ಡಿಕೆಶಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ