ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ?: ಇಂಧನ ಬೆಲೆ ಏರಿಕೆಯನ್ನು ಸಮರ್ಥಿಸಿದ ಎಂ.ಬಿ.ಪಾಟೀಲ

Sampriya

ಭಾನುವಾರ, 16 ಜೂನ್ 2024 (15:15 IST)
Photo Courtesy X
ವಿಜಯಪುರ: ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ? ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ಬೇರೆ ರಾಜ್ಯಗಳನ್ನು ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಇದೆ. ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯಿದೆ. ಯಾರ ಮೇಲೂ ಅನಾವಶ್ಯಕವಾಗಿ ಹೊರೆ ಹಾಕುತ್ತಿಲ್ಲ ಎಂದು ಅವರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮೋದಿಯವರು ಬಂದ ಮೇಲೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಅದನ್ನ ಯಾಕೆ ನೀವು ಕೇಳೋದಿಲ್ಲ. ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ 60 ರೂಪಾಯಿ ಪೆಟ್ರೋಲ್ ಇತ್ತು ಈಗ 105 ರೂಪಾಯಿ. ಉಳಿದ ರಾಜ್ಯಗಳನ್ನು ಹೋಲಿಕೆ ಮಾಡಿ ನೋಡಿ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದರು.

ನೆರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪೆಟ್ರೋಲ್, ಡೀಸೆಲ್ ದರ ಕಡಿಮೆಯಿದೆ. ತಮಿಳುನಾಡು ಹಾಗೂ ಇತರ ರಾಜ್ಯಗಳಲ್ಲಿ 5 ರಿಂದ 10 ರೂಪಾಯಿ ಹೆಚ್ಚಿಗೆ ದರ ಇದೆ. ಇತರ ರಾಜ್ಯಗಳಿಗಿಂತ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ಬೆಲೆ ಏರಿಕೆ ಮಾಡಲಾಗಿದೆ. ಸರ್ಕಾರಕ್ಕೆ ಆದಾಯ ಕಡಿಮೆಯಾಗುತ್ತಿದೆ ಅಭಿವೃದ್ಧಿಗೆ ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲ.ಹೀಗಾಗಿ ಅನವಶ್ಯಕವಾಗಿ ಹೆಚ್ಚಿಗೆ ಬೆಲೆ ಏರಿಕೆ ಮಾಡಲಾಗಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ