ಡೊನಾಲ್ಡ್ ಟ್ರಂಪ್ ಭೇಟಿ ವೇಳೆಯಲ್ಲೇ ದೆಹಲಿಯಲ್ಲಿ ನಿಷೇಧಾಜ್ಞೆ

ಮಂಗಳವಾರ, 25 ಫೆಬ್ರವರಿ 2020 (19:07 IST)
ಭಾರತಕ್ಕೆ ಎರಡು ದಿನಗಳ ಪ್ರವಾಸವನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಂಡಿರೋ ಸಮಯದಲ್ಲೇ ದೆಹಲಿಯಲ್ಲಿ ಘರ್ಷಣೆ ಭುಗಿಲೆದ್ದಿದ್ದು ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ.

ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಪರವಾಗಿ ನಡೆಯುತ್ತಿರುವ ಗಲಭೆಯಲ್ಲಿ 7 ಜನರು ಬಲಿಯಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹಿಂಸಾಚಾರ ಅಲ್ಲಲ್ಲಿ ಮುಂದುವರಿದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಪಡ್ತಿದ್ದಾರೆ.

ಮಾರುಕಟ್ಟೆಯಲ್ಲಿ ಹಲವು ಅಂಗಡಿ, ಪೆಟ್ರೊಲ್ ಬಂಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಹಲವಾರು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ