ಶಾಲೆಗಳಲ್ಲಿ ಮೊಟ್ಟೆ ಕೊಡುವುದು ನಿಲ್ಲಿಸುವುದಿಲ್ಲ: ನಾಗೇಶ್

ಸೋಮವಾರ, 13 ಫೆಬ್ರವರಿ 2023 (17:01 IST)
ಬೆಂಗಳೂರು : ಶಾಲೆಗಳಲ್ಲಿ ಮೊಟ್ಟೆ ಕೊಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದರು. ಶಾಲಾ ಮಕ್ಕಳಿಗೆ ಸರಿಯಾಗಿ ಮೊಟ್ಟೆ ವಿತರಣೆ ಆಗುತ್ತಿಲ್ಲ. ಬೆಲೆ ಜಾಸ್ತಿ ಆಯ್ತು ಅಂತ ಅಕ್ಟೋಬರ್, ನವೆಂಬರ್, ಡಿಸೆಂಬರ್ನಲ್ಲಿ ಮೊಟ್ಟೆ ವಿತರಣೆ ಆಗಿಲ್ಲ. ಸರ್ಕಾರ ಸಮರ್ಪಕವಾಗಿ ಮೊಟ್ಟೆ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ವಿಪಕ್ಷ ನಾಯಕ ಹರಿಪ್ರಸಾದ್ ಧ್ವನಿಗೂಡಿಸಿ, ಕೆಲ ಶಾಲೆಗಳಲ್ಲಿ ಉದ್ದೇಶ ಪೂರ್ವಕವಾಗಿ ಮೊಟ್ಟೆ ಕೊಡುತ್ತಿಲ್ಲ. ಬಾಳೆಹಣ್ಣು, ಚಿಕ್ಕಿ ಮಾತ್ರ ಕೊಡಲಾಗುತ್ತಿದೆ. ಕೆಲ ಶಾಲೆಗಳಲ್ಲಿ ಮೊಟ್ಟೆ ಕೊಡಬೇಡಿ ಅಂತ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮೊಟ್ಟೆ ಕೊಡುವುದನ್ನು ನಿಲ್ಲಿಸಬಾರದು ಎಂದು ಆಗ್ರಹಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ