ಆತ್ಮಹತ್ಯೆಗೆ ಮುನ್ನ ಒಂದು ಬಾರಿ ಕುಟುಂಬ ಬಗ್ಗೆ ಯೋಚಿಸಿ: ಸಿಎಂ ಸಿದ್ದರಾಮಯ್ಯ

ಶುಕ್ರವಾರ, 21 ಅಕ್ಟೋಬರ್ 2016 (11:43 IST)
ಅಧಿಕಾರಿಗಳ ಸರಣಿ ಆತ್ಮಹತ್ಯೆ ಹೆಚ್ಚಳವಾಗುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿಗಳ ಕೆಲಸ ಎಂದು ನ್ಯಾಯಾಲಯವೇ ಹೇಳಿದೆ. ಆತ್ಮಹತ್ಯೆಗೆ ಶರಣಾಗುವ ಮುನ್ನ ಒಂದು ಬಾರಿ ಕುಟುಂಬ ವರ್ಗದ ಕುರಿತು ಯೋಚಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.
 
ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಮಾತನಾಡಿದ ಅವರು, ಕುತಂತ್ರಕೊಳ್ಳಗಾಗಿ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆಗೆ ಶರಣಾಗಿದ್ದರು ಆದರೂ ಸರಕಾರದ ವತಿಯಿಂದ ಅವರ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗಿದೆ. ಯಾವುದೇ ಕಾರಣಕ್ಕೂ ಪೊಲೀಸ್ ಅಧಿಕಾರಿಗಳು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಹೇಳಿದರು. 
 
ಪೊಲೀಸ್‌ರನ್ನು ಕೆಲವರು ಪ್ರಚೋದಿಸುತಿದ್ದಾರೆ. ಆದರೆ, ಯಾವುದೇ ಪ್ರಚೋದನೆಗೆ ಪೊಲೀಸರು ಒಳಗಾಗಬಾರದು. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಈ ಇಲಾಖೆಯಲ್ಲಿ ಅಶಿಸ್ತಿಗೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ