ತಮಿಳುನಾಡಿಗೆ ನೀರು ಬಿಡುವುದು ಬೇಡ: ಸರ್ವಪಕ್ಷ ಸಭೆ ತೀರ್ಮಾನ
ಶನಿವಾರ, 27 ಆಗಸ್ಟ್ 2016 (15:41 IST)
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಸರ್ವಪಕ್ಷ ಸಭೆಯಲ್ಲಿ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಗಿದೆ.
ಕಾವೇರಿ ನದಿಯಿಂದ ನೀರು ಬಿಡುವಂತೆ ತಮಿಳುನಾಡು ಸರಕಾರದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.
ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಸರಕಾರ ತನ್ನ ಬಿಗು ನಿಲುವನ್ನು ಮುಂದುವರೆಸಲಿ. ನಾವು ಸರಕಾರದ ಜೊತೆ ಇರುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಮಳೆ ಕೊರತೆಯಿಂದ ರಾಜ್ಯದಲ್ಲಿ ನೀರಿನ ಅಭಾವವಿರುವ ಹಿನ್ನೆಲೆಯಲ್ಲಿ ರಾಜ್ಯದ ಪರಿಸ್ಥಿತಿಯ ಕುರಿತು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ