ಯಾವುದೇ ಕಾರಣಕ್ಕೂ ನೀರು ಬಿಡುವುದು ಬೇಡ: ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಮಂಗಳವಾರ, 27 ಸೆಪ್ಟಂಬರ್ 2016 (18:45 IST)
ಯಾವುದೇ ಕಾರಣಕ್ಕೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸದಂತೆ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸುವುದು ಬೇಡ ಎನ್ನುವ ರಾಜ್ಯ ಸರಕಾರದ ನಿರ್ಣಯಕ್ಕೆ ಎಲ್ಲರೂ ಬೆಂಬಲ ವ್ಯಕ್ತಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮನವಿ ಮಾಡಿಕೊಂಡಿದ್ದಾರೆ. 
 
ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ಎರಡು ದಿನಗಳ ಅವಧಿಯಲ್ಲಿ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ