ಸರ್ಜಿಕಲ್ ಸ್ಟ್ರೈಕ್‌ನ್ನು ಮಹತ್ಸಾಧನೆ ಎಂದು ಬಿಂಬಿಸಿಕೊಳ್ಳಬೇಡಿ: ಪ್ರಧಾನಿಗೆ ಗೌಡರ ಸಲಹೆ

ಮಂಗಳವಾರ, 18 ಅಕ್ಟೋಬರ್ 2016 (15:54 IST)
ಸರ್ಜಿಕಲ್ ಸ್ಟ್ರೈಕ್‌ನ್ನು ಮಹತ್ಸಾಧನೆ ಎಂದು ಬಿಂಬಿಸಿಕೊಳ್ಳಬೇಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕೇಂದ್ರ ಸರಕಾರಕ್ಕೆ ಕಿವಿಮಾತು ಹೇಳಿದರು. 
 
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಸೇನೆ ನಡೆಸಿರುವ ಸರ್ಜಿಕಲ್ ಸ್ಟ್ರೈಕ್‌ನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳಬೇಡಿ. ಸರ್ಜಿಕಲ್ ಸ್ಟ್ರೈಕ್‌ನ್ನು ಮಹತ್ಸಾಧನೆ ಎಂದು ಕೇಂದ್ರ ಸರಕಾರ ಬಿಂಬಿಸುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.
 
ಪಿಓಕೆಯಲ್ಲಿ ಭಾರತೀಯ ಸೇನೆ ನಡೆಸಿರುವ ಸರ್ಜಿಕಲ್ ಸ್ಟ್ರೈಕ್‌ ಯುದ್ಧವಲ್ಲ. ರಾಜಕೀಯ ಉದ್ದೇಶದಿಂದ ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್‌ ಮಹತ್ಸಾಧನೆ ಎಂದು  ಬಿಂಬಿಸುತ್ತಿದೆ ಎಂದು ಆರೋಪಿಸಿದರು.
 
ಸರ್ಜಿಕಲ್ ಸ್ಟ್ರೈಕ್‌ ಕುರಿತು ನನಗೆ ಪೋನ್ ಮೂಲಕ ಮಾಹಿತಿ ನೀಡಿದ್ದರು. ಪಿಓಕೆಗೆ ನುಗ್ಗಿ ಭಾರತೀಯ ಸೇನೆ ನಡೆಸಿರುವ ದಾಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದೆ ಎಂದು ತಿಳಿಸಿದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ನನ್ನ ಪ್ರವಾಸದ ನಂತರ ಜೆಡಿಎಸ್ ರಾಜ್ಯಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಪ್ರವಾಸ ಮುಂದುವರೆಸಲಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾಹಿತಿ ನೀಡಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ