ಸಂಗೊಳ್ಳಿ ರಾಯಣ್ಣನ ಹೆಸರು ರಾಜಕೀಯಕ್ಕೆ ಬಳಸಬೇಡಿ: ಸಿಎಂ ಮನವಿ

ಶುಕ್ರವಾರ, 27 ಜನವರಿ 2017 (17:04 IST)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರನ್ನು ರಾಜಕೀಯಕ್ಕೆ ಬಳಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕಾಗಿ ಹೋರಾಟ ಮಾಡಿರುವ  ರಾಯಣ್ಣನನ್ನು ದೇಶಭಕ್ತನಾಗಿ ನೋಡಬೇಕು. ರಾಜಕೀಯ ಉದ್ದೇಶಕ್ಕಾಗಿ ದೇಶಭಕ್ತರ ಹೆಸರನ್ನು ಬಳಕೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡಲು ರಾಯಣ್ಣ ಬ್ರಿಗೇಡ್ ಸ್ಥಾಪಿಸಿದ್ದಾರೆ. ರಾಜಕೀಯ ಉದ್ದೇಶಕ್ಕಾಗಿ ದೇಶಭಕ್ತರ ಹೆಸರನ್ನು ಬಳಕೆ ಮಾಡಿಕೊಳ್ಳುವ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಕಿಡಿಕಾರಿದರು. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ಬ್ರಿಗೇಡ್‌ಗೆ ಬಿ.ಎಸ್.ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ